ಯುವ ನಟ, ರಾಜಕಾರಣಿ ನಿಖಿಲ್ ಕುಮಾರ ಸ್ವಾಮಿ ಅವರ ವಿವಾಹ ನಿಶ್ಚಿತಾರ್ಥ ಸೋಮವಾರ ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ವೈಭೋಗದೊಂದಿಗೆ ನೆರವೇರಿತು.
ಮಾಜಿ ಸಚಿವ ಎಂ.ಕೃಷ್ಣಪ್ಪ ಅವರ ಸಹೋದರನ ಮೊಮ್ಮಗಳಾದ ರೇವತಿ ಅವರೊಂದಿಗೆ ನಿಖಿಲ್‍ಕುಮಾರಸ್ವಾಮಿ ಮದುವೆ ನಿಶ್ಚಿತಾರ್ಥ ನೆರವೇರಿದ್ದು ಎರಡೂ ಕುಟುಂಬಗಳ ಬಂಧು-ಬಳಗ ಹಾಗೂ ಹಿರಿಯರ ಉಪಸ್ಥಿತಿಯಿತ್ತು.