
ಕನ್ನಡ ಚಿತ್ರರಂಗದಲ್ಲಿ ‘ಮೀಸೆ ಕೃಷ್ಣ’ ಎನ್ನುವ ಹೆಸರಿಗೆ ಪಾತ್ರರಾಗಿದ್ದ ಬಿ ಎಂ ಕೃಷ್ಣಮೂರ್ತಿಯವರು ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಹೃದಯಾಘಾತಕ್ಕೊಳಗಾದ ಇವರಿಗೆ 69 ವರ್ಷ ವಯಸ್ಸಾಗಿತ್ತು.
ಕನ್ನಡ ಚಿತ್ರರಂಗದ ಹಿರಿಯ ಹಾಗೂ ಜನಪ್ರಿಯ ವಾಹನ ಚಾಲಕರಾಗಿ ಗುರುತಿಸಿಕೊಂಡಿದ್ದ ಇವರು ಚಲನಚಿತ್ರ ಕಾರ್ಮಿಕರ ಒಕ್ಕೂಟದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ವಾಹನ ಚಾಲಕರ ಸಂಘದ ಅಧ್ಯಕ್ಷರೂ ಆಗಿದ್ದರು. ಕನ್ನಡ ಚಿತ್ರರಂಗದಲ್ಲಿ ನಲವತ್ತು ವರ್ಷಗಳಿಂದ ಕೆಲಸ ಮಾಡಿದ ಅನುಭವ ಇವರದಾಗಿತ್ತು.