‘ಶಬರಿ ಮಲೆ ಸ್ವಾಮಿ ಅಯ್ಯಪ್ಪ’ ನಿರ್ದೇಶಕ ನಿಧನ

ಕನ್ನಡ ಚಿತ್ರರಂಗದಲ್ಲಿ ಕವಿರತ್ನ ಕಾಳಿದಾಸ, ಅಂಜದ ಗಂಡು ಅಂತಹ ಹಿಟ್, ಸೂಪರ್ ಹಿಟ್, ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿದ್ದ ನಿರ್ದೇಶಕ ರೇಣುಕಾ ಶರ್ಮಾ ಕೊರೊನಾಗೆ ಬಲಿಯಾಗಿದ್ದಾರೆ.

81 ವರ್ಷದವರಾಗಿದ್ದ ರೇಣುಕಾ ಶರ್ಮಾ ಕೊರೊನಾ ಸೋಂಕು ತಗುಲಿದ್ದು, ಕಳೆದ ದಿನಗಳಿಂದ ಗಿರಿನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನ್ಯುಮೋನಿಯಾ ಖಾಯಿಲೆ ಇದ್ದ ಕಾರಣ ನಿರ್ದೇಶಕ ರೇಣುಕಾ ಶರ್ಮಾ, ನಿನ್ನೆ ರಾತ್ರಿ ಕೊರೋನಾ ಸೋಂಕಿನಿಂದಾಗಿ ವಿಧಿವಶರಾಗಿದ್ದಾರೆ. 

1981ರಲ್ಲಿ ‘ಅನುಪಮ’ ಚಿತ್ರದ ಮೂಲಕ ನಿರ್ದೇಶಕರಾದ ರೇಣುಕಾ ಶರ್ಮಾ ಕವಿರತ್ನ ಕಾಳಿದಾಸ, ಶಹಬ್ಬಾಸ್ ವಿಕ್ರಮ್, ಸತ್ಕಾರ ಹಾಗೂ ನಮ್ಮೂರ ದೇವತೆ, ಅಂಜದ ಗಂಡು, ಶಬರಿ ಮಲೆ ಸ್ವಾಮಿ ಅಯ್ಯಪ್ಪ, ಭರ್ಜರಿ ಗಂಡು ಹಾಗೂ ಹಠಮಾರಿ ಹೆಣ್ಣು ಕಿಲಾಡಿ ಗಂಡು, ಕೊಲ್ಲೂರು ಶ್ರೀ ಮೂಕಾಂಬಿಕೆ ಸೂಪರ್ ಹಿಟ್ ಸಿನಿಮಾಗಳನ್ನ ನಿರ್ದೇಶನ ಮಾಡಿದ್ದಾರೆ. ರೇಣುಕಾ ಶರ್ಮಾ ಪತ್ನಿ ಇಬ್ಬರು ಹೆಣ್ಣು ಮಕ್ಕಳನ್ನ ಅಗಲಿದ್ದಾರೆ. ಇಂದು ಬೆಂಗಳೂರಿನ ಅಂತ್ಯ ಸಂಸ್ಕಾರ ಮಾಡಲು ಕುಟುಂಬ ವರ್ಷ ತೀರ್ಮಾನಿಸಿದೆ.

Recommended For You

Leave a Reply

error: Content is protected !!
%d bloggers like this: