ಲಂಬಾಣಿಯಾದ ಶುಭಾ ಪೂಂಜಾ !

ಬಿಗ್ ಬಾಸ್ ನಿಂದ ಮರಳಿದ ಬಳಿಕ ಯಾವ ಸಿನಿಮಾಗಳಲ್ಲಿಯೂ ಕಾಣಿಸಿರದ ಶುಭಾಪೂಂಜಾ ಇದೀಗ ಹೊಸ ಸಿನಿಮಾದಲ್ಲಿ ಲಂಬಾಣಿ ಹುಡುಗಿಯಾಗಿ ಬರಲಿದ್ದಾರೆ. ಚಿತ್ರದ ಕುರಿತಾದ ವಿವರವಾದ ಮಾಹಿತಿ ಇಲ್ಲಿದೆ.

‘ಕೆಲವು ದಿನಗಳ ನಂತರ’ ಎನ್ನುವ ಸಿನಿಮಾದ ನೀಡಿದ ನಿರ್ದೇಶಕ ಶ್ರೀನಿ ಕೆಲವು ವರ್ಷಗಳ ನಂತರ ಮರಳಿದ್ದಾರೆ. ಇದೀಗ ಹೊಸತೊಂದು ವಿಭಿನ್ನ ಪ್ರಯತ್ನಕ್ಕೆ ಕೈಹಾಕಿರುವ ಅವರು ಹೊಸ ಹಂಬಲದೊಂದಿಗೆ ‘ಅಂಬುಜ’ ಎನ್ನುವ ಚಿತ್ರ ಮಾಡಲು ಮುಂದಾಗಿದ್ದಾರೆ. ಅಂದಹಾಗೆ ‘ಅಂಬುಜ’ದ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿದೆ.

ಶುಭಾಪೂಂಜಾ ಅಂಬುಜ ಚಿತ್ರದಲ್ಲಿ ಒಂದು ವಿಶೇಷ ಗೆಟಪ್ ನಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಲಿದ್ದಾರೆ. ಇವರ ಜೊತೆಗೆ ಪದ್ಮಜಾರಾವ್, ಕಾಮಿಡಿಕಿಲಾಡಿ ಖ್ಯಾತಿಯ ಗೋವಿಂದೇಗೌಡ, ಅದರ ನಿರ್ದೇಶಕ ಶರಣಯ್ಯ, ಸಂದೇಶ್ ಶೆಟ್ಟಿ ಅಜ್ರಿ, ಮಜಾಭಾರತದ ಪ್ರಿಯಾಂಕ ಕಾಮತ್, ಬೇಬಿ ಆಕಾಂಕ್ಷ ಹಾಗೂ ಇನ್ನಿತರರು ಅಭಿನಯಿಸಲಿರುವುದಾಗಿ ಚಿತ್ರತಂಡ ಹೇಳಿದೆ.

ಸಮಾಜದಲ್ಲಿ ಆಗುವ ಒಂದಷ್ಟು ಅವಘಡಗಳು ಹೇಗೆ ಸಾಮಾನ್ಯ ಜನರ ಬದುಕನ್ನ ಹಾಳು ಮಾಡುತ್ತವೆ. ಹಾಗೂ ಅವರು ಅನುಭವಿಸುವ ತೊಂದರೆಗಳೇನು…? ಅವರ ಅಸಹಾಯಕತೆಯನ್ನ ಸಮಾಜ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಜ್ಞಾನ-ವಿಜ್ಞಾನ-ಅಜ್ಞಾನಗಳ ಒಟ್ಟು ಚಿತ್ರಣವೇ ಅಂಬುಜ ಸಿನಿಮಾದ ಹೈಲೆಟ್ಸ್ ಆಗಿದೆ. ಮಾತ್ರವಲ್ಲ, ಅಂಬುಜ ಒಂದು ಮಹಿಳಾ ಪ್ರಧಾನ ಹಾಗೂ ನೈಜ ಘಟನೆಯಾಧಾರಿತ ಚಿತ್ರವಾಗಿದೆ ಮತ್ತು ಈ ಚಿತ್ರದಲ್ಲಿ ಬರುವ ಲಂಬಾಣಿ ಪಾತ್ರದ ವಸ್ತ್ರ ಹಾಗೂ ಆಭರಣಗಳನ್ನು ರಡಿಮಾಡಲು ಚಿತ್ರತಂಡ ನಾಲ್ಕು ತಿಂಗಳುಗಳು ತೆಗೆದುಕೊಂಡಿದೆಯಂತೆ. ಗದಗ ಜಿಲ್ಲೆಯ ಒಂದು ಲಂಬಾಣಿ ತಾಂಡಾದಲ್ಲಿ ಸುಮಾರು 4ತಿಂಗಳು ಇದನ್ನು ತಯಾರು ಮಾಡಲು ಸಮಯ ನೀಡಿದ್ದೇವೆ ಎಂದು ನಿರ್ದೇಶಕ ಶ್ರೀನಿ ಮತ್ತು ನಿರ್ಮಾಪಕ ಕಾಶೀನಾಥ್ ಮಡಿವಾಳರ್ ಹೇಳುತ್ತಾರೆ.

ಲಂಬಾಣಿ ವಸ್ತ್ರಾಲಂಕಾರದ ತೂಕ ಬರೋಬ್ಬರಿ 20 ಕೆ.ಜಿ ಇದೆ! ಅದನ್ನು ಇಡೀ ಸಿನಿಮಾದಲ್ಲಿ ಶುಭಾಪೂಂಜಾ ಹಾಕಿಕೊಂಡು ಚಿತ್ರೀಕರಣ ಮಾಡುವುದೇ ದೊಡ್ಡ ಸಾಹಸ ಎಂದು ಚಿತ್ರತಂಡ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದೀಗ ಚಿತ್ರದ ಪ್ರೀ ಪ್ರೊಡಕ್ಷನ್ ಕೆಲಸಗಳು ಮುಗಿದಿದ್ದು ಅಕ್ಟೋಬರ್ ತಿಂಗಳಲ್ಲಿ ಒಂದೇ ಶೆಡ್ಯೂಲ್ ನಲ್ಲಿ ಚಿತ್ರೀಕರಣ ಶುರು ಮಾಡಲಿದೆ ಚಿತ್ರತಂಡ ಹಾಗೂ ಚಿತ್ರದ ಚಿತ್ರೀಕರಣ ಬೆಂಗಳೂರು, ಗದಗ, ಹಾಗೂ ಚಿಕ್ಕ ಮಂಗಳೂರು ಉಡುಪಿ ,ಕುಂದಾಪುರ ಭಾಗಗಳಲ್ಲಿ ನಡೆಯಲಿದೆಯಂತೆ ಈ ಚಿತ್ರಕ್ಕೆ ಕಾಶೀನಾಥ್ ಮಡಿವಾಳರ್ ರವರು ಕಥೆಯನ್ನು ಬರೆದು, ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.
ಸಾಮಾಜಿಕ ಕಳಕಳಿಯ ಚಿತ್ರ ನಿರ್ದೇಶಿಸಿದ್ದ ಶ್ರೀನಿ ಹನುಮಂತರಾಜು ಚಿತ್ರಕಥೆ-ನಿರ್ದೇಶನ ಹೊತ್ತಿದ್ದಾರೆ.

ಮುರಳೀಧರ್ ಕ್ಯಾಮೆರಾ ವರ್ಕ್ ಹಾಗೂ ಸಂಗೀತವನ್ನು ಪ್ರಸನ್ನ ಕುಮಾರ್ ಹಾಗೂ ಹಿನ್ನೆಲೆ ಸಂಗೀತವನ್ನು ಎಂ.ಎಸ್ ತ್ಯಾಗರಾಜರವರು ಮಾಡಲಿದ್ದು ಚಿತ್ರ ಮುಂದಿನ ತಿಂಗಳು ಚಿತ್ರೀಕರಣಕ್ಕೆ ಹೋಗಲು ಸಕಲ ಸಿದ್ಧತೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

Recommended For You

Leave a Reply

error: Content is protected !!
%d bloggers like this: