
ನಟ ದುನಿಯಾ ವಿಜಯ್ ತಂದೆ ರುದ್ರಪ್ಪ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.
ರುದ್ರಪ್ಪ ಅವರು ಕಳೆದ ಒಂದಷ್ಟು ಸಮಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ವೈದ್ಯರ ಪ್ರಯತ್ನ ಫಲಕಾರಿಯಾಗದೆ ಮುಂಜಾನೆಯೇ ಕೊನೆಯುಸಿರೆಳೆದಿದ್ದಾರೆ. ಆನೇಕಲ್ ನ ಕುಂಬಾರಹಳ್ಳಿಯಲ್ಲಿ ರುದ್ರಪ್ಪ ಅವರ ಅಂತ್ಯಕ್ರಿಯೆ ನಡೆಯಲಿರುವುದಾಗಿ ತಿಳಿದುಬಂದಿದೆ.
ಕಳೆದ ಜುಲೈ ತಿಂಗಳಲ್ಲಿ ವಿಜಯ್ ಅವರ ತಾಯಿ ಅನಾರೋಗ್ಯದಿಂದ ನಿಧನರಾಗಿದ್ದರು. ಇದೀಗ ಪತ್ನಿಯನ್ನು ಕಳೆದುಕೊಂಡ ನಾಲ್ಕೇ ತಿಂಗಳಲ್ಲಿ ರುದ್ರಪ್ಪ ಅವರು ಕೂಡ ನಿಧನರಾಗಿರುವುದು ಅವರಿಬ್ಬರ ಅನ್ಯೋನ್ಯ ದಾಂಪತ್ಯಕ್ಕೆ ನಿದರ್ಶನದಂತಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ‘ಮಿಸ್ ಯೂ ಅಪ್ಪ’ ಎಂದು ಬರೆಯುವ ಮೂಲಕ ತಮ್ಮ ದುಃಖ ಹಂಚಿಕೊಂಡಿದ್ದಾರೆ.