ಕಿಚ್ಚನ ಮೂಲಕ ’83’ ತೆರೆಗೆ..!

ಬಹುಭಾಷೆಗಳಲ್ಲಿ ತೆರೆಕಾಣುತ್ತಿರುವ ಸಿನಿಮಾ ‘83’. ಭಾರತ ಏಕ ದಿನದ ವಿಶ್ವ ಕಪ್ ಕ್ರಿಕೆಟ್ ತನ್ನ ಮಡಿಲಿಗೆ ಪಡೆದ ವರ್ಷದ ಕುರಿತಾದ ಈ ಸಿನಿಮಾ ಕ್ರಿಸ್ಮಸ್ ಬಿಡುಗಡೆಗೆ ಸಜ್ಜಾಗಿದೆ. ಹಿಂದಿಯಲ್ಲಿ ತಯಾರಾಗಿರುವ ಈ ಚಿತ್ರದ ಕನ್ನಡ ಡಬ್ಬಿಂಗ್ ಸಿನಿಮಾವನ್ನು ಕ್ರಿಕೆಟ್ ಪ್ರೇಮಿ, ನಟ, ನಿರ್ದೇಶಕ, ನಿರ್ಮಾಪಕ ಕಿಚ್ಚ ಸುದೀಪ್ ಅವರು ತೆರೆಗೆ ಅರ್ಪಿಸುತ್ತಿದ್ದಾರೆ.

ಕಿಚ್ಚ ಸುದೀಪ್ ಅವರು ರಿಲಯನ್ಸ್ ಎಂಟರ್ಟೇನ್ಮೆಂಟ್ ಜೊತೆ ಸೇರಿ ಬಹು ನಿರೀಕ್ಷಿತ ಸಿನಿಮಾ ’83’ ಚಿತ್ರ ತೆರೆಗೆ ತರುತ್ತಿದ್ದಾರೆ. ಕನ್ನಡದಲ್ಲಿ ತೆರೆ ಕಾಣುತ್ತಿರುವ ‘83’ ಸಿನಿಮಾವನ್ನು ನಾನು ಅರ್ಪಿಸುವುದಕ್ಕೆ ಸಂತೋಷ ಪಡುತ್ತಿದ್ದೇನೆ ಎಂದಿರುವ ಕಿಚ್ಚ ಸುದೀಪ್, “ಇದೊಂದು ನಂಬಲಾಗದ ಬಹುದೊಡ್ಡ ಕ್ರಿಕೆಟ್ ಚರಿತ್ರೆಯಾಗಿದೆ. 1983ರ ಭಾರತ ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ವಿಶ್ವ ಕಪ್ ಸ್ಪರ್ಧೆ ಅತ್ಯಂತ ಕುತೂಹಲಕಾರಿಯಾಗಿತ್ತು. ಕ್ರಿಕೆಟ್ ಎಂಬುದು ಭಾರತಿಯರಿಗೆ ಒಂದು ಧರ್ಮವೇ ಆಗಿ ಹೋಗಿರುವಾಗ ಈ ನೈಜ ಕಥೆಯನ್ನು ತೆರೆಯ ಮೇಲೆ ತಂದಿರುವುದಕ್ಕೆ ಅಭಿನಂದನೆಗಳು” ಎಂದಿದ್ದಾರೆ.

ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕರಾದ ಕಬೀರ್ ಖಾನ್ ಅವರು “83 ಕನ್ನಡದ ಅವತರಣಿಕೆಯನ್ನು ಕಿಚ್ಚ ಸುದೀಪ್ ತೆರೆಗೆ ಅರ್ಪಣೆ ಮಾಡುತ್ತಾ ಇರುವುದು ಬಹಳ ಸಂತೋಷದ ವಿಚಾರ” ಎಂದಿದ್ದಾರೆ. ಕಿಚ್ಚ ಸುದೀಪ್ ಅವರು ನಮ್ಮ ತಂಡದೊಂದಿಗೆ ಸೇರಿಕೊಂಡಿರುವುದರಿಂದ ‘83’ ಸಿನಿಮಾಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುವುದು ಎಂದು ಕಬೀರ್ ಖಾನ್ ಭಾವಿಸಿದ್ದಾರೆ.

ರಣವೀರ್ ಸಿಂಗ್ ಅವರು 83 ಚಿತ್ರದಲ್ಲಿ ಕಪಿಲ್ ದೇವ್ ಪಾತ್ರವನ್ನು ನಿರ್ವಹಿಸಿದ್ದಾರೆ. ತಾಹೀರ್ ರಾಜ್ ಭಾಸಿನ್, ಜೀವ, ಸಾಕಿಬ್ ಸಲೀಂ, ಜತಿನ್ ಸಾರ್ಣ, ಚಿರಾಗ್ ಪಾಟಿಲ್, ದಿನಕರ್ ಶರ್ಮ, ನಿಶಾಂತ್ ದಾಹಿಯ, ಹಾರ್ಡಿ ಸಂಧು, ಸಾಹಿಲ್ ಖಟ್ಟರ್, ಅಮ್ಮಿ ವಿರ್ಕ್, ಅದಿನಾಥ್ ಕೊತಾರೆ, ಧೈರ್ಯ ಕರ್ವ, ಆರ್ ಬದ್ರಿ ಹಾಗೂ ಪಂಕಜ್ ತ್ರಿಪಾಠಿ ತಾರಾಗಣದಲ್ಲಿದ್ದಾರೆ. ಒಂದು ವಿಶೇಷ ಪಾತ್ರದಲ್ಲಿ ಜನಪ್ರಿಯ ನಟಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದಾರೆ.

ಕನ್ನಡದ 83 ಸಿನಿಮಾದ ವಿತರಣೆಯಜವಾಬ್ದಾರಿಯನ್ನು ಶಾಲಿನಿ ಆರ್ಟ್ಸ್ ಹಾಗೂ ರಿಲಯನ್ಸ್ ಎಂಟರ್ಟೈನ್ಮೇಂಟ್ ಸಂಸ್ಥೆ ವಹಿಸಿಕೊಂಡಿದ್ದು, ಚಿತ್ರ ಡಿಸೆಂಬರ್ 24ರಂದು ತೆರೆಕಾಣಲಿದೆ.

Recommended For You

Leave a Reply

error: Content is protected !!
%d bloggers like this: