ಕಾಲವಾದ ಕಲಾತಪಸ್ವಿ ರಾಜೇಶ್

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಇಂದು ನಿಧನರಾಗಿದ್ದಾರೆ. ಅವರಿಗೆವ 86ವರ್ಷ ವಯಸ್ಸಾಗಿತ್ತು.
ಕಳೆದ ಐದು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕೊಳಗಾಗಿದ್ದ ಅವರನ್ನು ಬೆಂಗಳೂರಿನ ಕಸ್ತೂರ್ ಬಾ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು
.

ರಾಜೇಶ್ ಅವರು ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ರಾಜೇಶ್ ಅವರಿಗೆ 82 ವರ್ಷ ವಯಸ್ಸಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ‌.

ಹಲವು ದಶಕಗಳಿಂದ ಚಿತ್ರರಂಗದಲ್ಲಿ ಅನುಭವ ಹೊಂದಿರುವ ಅವರು ಇತ್ತೀಚಿನ ವರ್ಷಗಳಲ್ಲಿ ನಟನೆಯಿಂದ ದೂರ ಉಳಿದುಕೊಂಡಿದ್ದರು.
ರಾಜೇಶ್ ಅವರು ಪಿ ಡಬ್ಲ್ಯೂಡಿ ಇಲಾಖೆಯಲ್ಲಿ ಶೀಘ್ರಲಿಪಿ ಮತ್ತು ಬೆರಳಚ್ಚುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು‌. ರಂಗಭೂಮಿಯಿಂದ ಸಿನಿಮಾ ರಂಗ ಪ್ರವೇಶ ಮಾಡಿದ ರಾಜೇಶ್ ಅವರು ರಾಜ್ ಕುಮಾರ್, ಉದಯಕುಮಾರ್, ಅವರ ಸಮಕಾಲೀನರಾಗಿ ಮಹಾನ್ ಪ್ರತಿಭೆಗಳ ಕಾಲದಲ್ಲಿ ಕೂಡಾ ತಮ್ಮದೆ ಆದ ವಿಶಿಷ್ಟ ಛಾಪನ್ನು ಚಿತ್ರರಂಗದಲ್ಲಿ ಮೂಡಿಸಿದ್ದರು.

ರಾಜೇಶ್ ಅವರು ನಾಯಕರಾಗದೆ, ನಾಯಕನ ಅಥವಾ ನಾಯಕಿಯ ಅಣ್ಣನಂತಹ ಪಾತ್ರಗಳಲ್ಲಿ ಅಭಿನಯಿಸಿದಾಗ ಸಹಾ ಅದು ಬಹಳಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ‘ ಕರ್ಣ’ ಚಿತ್ರದಲ್ಲಿ ಡಾಕ್ಟರ್ ಆಗಿ ಅಭಿನಯಿಸಿದ ಅವರ ಗಾಂಭೀರ್ಯ ಕೂಡಾ ಬಹಳ ಕಾಲ ನೆನಪುಳಿಯುವಂಥದ್ದು. ರಾಜೇಶ್ ಅವರ ಭಾಷಾ ಉಚ್ಚಾರ, ಭಾವಾಭಿನಯ ಉತ್ತಮ ಗುಣ ಮಟ್ಟದ್ದಾಗಿತ್ತು.

ರಾಜೇಶ್ ಅವರನ್ನು ಹಲವಾರು ಪ್ರಶಸ್ತಿ ಗೌರವಗಳು ಅರಸಿ ಬಂದಿವೆ. ಇವಕ್ಕೆಲ್ಲ ಶಿಖರ ಪ್ರಾಯದಂತೆ ಧಾರವಾಡ ವಿಶ್ವವಿದ್ಯಾಲಯವು ರಾಜೇಶ್ ಅವರಿಗೆ ಡಾಕ್ಟರೇಟ್ ಗೌರವವನ್ನು ಸಲ್ಲಿಸಿತ್ತು. ರಾಜೇಶ್ ಅವರಿಗೆ ಐದು ಮಂದಿ ಮಕ್ಕಳು. ಅವರಲ್ಲಿ ನಟಿಯಾಗಿದ್ದ ಆಶಾರಾಣಿಯನ್ನು ಅರ್ಜುನ್ ಸರ್ಜಾ ವಿವಾಹವಾಗಿದ್ದಾರೆ.

ರಾಜೇಶ್ ಅವರಿಗೆ ತಂದೆ ತಾಯಿ ಇಟ್ಟ ಹೆಸರು ಶ್ರೀರಾಮ್ ಎಂದಾಗಿತ್ತು! ಚಿತ್ರರಂಗದಲ್ಲಿ ರಾಜೇಶ್ ಎಂದು ಬದಲಾಯಿಸಲಾಗಿತ್ತು. ನಮ್ಮ ಊರು, ದೇವರ ದುಡ್ಡು ಮೊದಲಾದ ಜನಪ್ರಿಯ ಸಿನಿಮಾಗಳು ಸೇರಿದಂತೆ 150ಕ್ಕೂ ಚಿತ್ರಗಳಲ್ಲಿ ನಟಿಸಿದ್ದಾರೆ.

Recommended For You

Leave a Reply

error: Content is protected !!