‘ಭೀಮ’ನ ಕೈಯ್ಯಲ್ಲಿ ‘ಬೈರಾಗಿ’ ಹಾಡು

ಡಾ.ಶಿವರಾಜ್‌ಕುಮಾರ್ ನಟನೆಯ 123ನೇ ಸಿನಿಮಾ ‘ಬೈರಾಗಿ’ ಪ್ರಸ್ತುತ ಪೋಸ್ಟ್‌ ಪ್ರೊಡಕ್ಷನ್ ಹಂತದಲ್ಲಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಈ ಚಿತ್ರದ ಮೊದಲ ಹಾಡನ್ನು ಸ್ಯಾಂಡಲ್’ವುಡ್ ‘ಭೀಮ’ನಾಗಿ ಬೆಳೆಯುತ್ತಿರುವ ದುನಿಯಾ ವಿಜಯ್ ಅವರಿಗೆ ಅನಾವರಣಗೊಳಿಸಿದೆ ಚಿತ್ರತಂಡ.

ಇದು ಶಿವಣ್ಣನ ಎಂಟ್ರಿ ಸಾಂಗ್ ಆಗಿದ್ದು ಸಖತ್ ಮಾಸ್ ಆಗಿ ಮೂಡಿಬಂದಿದೆ. ಡಾ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ, ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡಿಗೆ ಆ್ಯಂಟನಿ ದಾಸನ್ ದನಿಗೂಡಿಸಿದ್ದಾರೆ.

ಹಾಡು ಕೇಳಿದ ವಿಜಯ್, “ಆ್ಯಂಟನಿ ದಾಸ್ ವಾಯ್ಸ್ ಕೇಳಿದಾಕ್ಷಣ ಥ್ರಿಲ್ ಆಗಿಹೋದೆ. ಶಿವಣ್ಣನ ಎನರ್ಜಿಗೆ ಸರಿದೂಗುವಂಥ ಹಾಡಿದು. ನಾನಂತೂ ಸಖತ್ ಎಂಜಾಯ್ ಮಾಡಿದೆ. ಈ ಹಾಡನ್ನು ಕೇಳಿದವರೂ ಇಷ್ಟಪಡುತ್ತಾರೆ ಎಂಬ ಭರವಸೆಯಿದೆ’ ಎಂದಿದ್ದಾರೆ.

‘ನೂರಾರು ಡಾನ್ಸರ್ಸ್, ಬೃಹತ್ ಸೆಟ್, ಕಲರ್’ಫುಲ್ ಕಾಸ್ಟ್ಯೂಮ್’ನಲ್ಲಿ ಶಿವಣ್ಣಈ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಬನ್ನೇರುಘಟ್ಟ ಸಮೀಪದ ದೇವಸ್ಥಾನವೊಂದರ ಬಳಿ ಜಾತ್ರೆ ಸೆಟ್ ಹಾಕಲಾಗಿತ್ತು. ದೊಡ್ಡ ಮಟ್ಟದಲ್ಲಿ ಈ ಹಾಡು ಮೂಡಿಬಂದಿದೆ’ ಎನ್ನುತ್ತಾರೆ ನಿರ್ಮಾಪಕ ಕೃಷ್ಣ ಸಾರ್ಥಕ್.

ವಿಜಯ್ ಮಿಲ್ಟನ್‌ ನಿರ್ದೇಶನ ಹಾಗೂ ಛಾಯಾಗ್ರಹಣವಿರುವ ಈ ಸಿನಿಮಾಕ್ಕೆ ಅವರೇ ಕಥೆ, ಚಿತ್ರಕಥೆ ಒದಗಿಸಿದ್ದಾರೆ. ಗುರು ಕಶ್ಯಪ್ ಸಂಭಾಷಣೆ ಈ ಚಿತ್ರಕ್ಕಿದೆ. ಕೃಷ್ಣ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕೃಷ್ಣ ಸಾರ್ಥಕ್ ‘ಬೈರಾಗಿ’ ನಿರ್ಮಿಸಿದ್ದಾರೆ. ರಾಜ್ಯಾದ್ಯಂತ ಜಗದೀಶ್ ಗೌಡ ಈ ಸಿನಿಮಾವನ್ನು ವಿತರಿಸಲಿದ್ದಾರೆ.

Recommended For You

Leave a Reply

error: Content is protected !!
%d bloggers like this: